Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:36 - ಕನ್ನಡ ಸತ್ಯವೇದವು C.L. Bible (BSI)

36 ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೆನಿ ಶಿಕ್ ಹೊತ್ತ್ಯಾ ಲೊಕಾಕ್ನಿ ತುಜ್ಯಾ ಅಂಗಿಚ್ಯಾ ತುದಿಚ್ಯಾ ಘೊಂಡ್ಯಾಕ್ ತರ್‍ಬಿ ಹಾತ್ ಲಾವಿ ಸರ್ಕೊ ಅವ್ಕಾಸ್ ಕರುನ್ ದಿ ಮನುನ್ ಮಾಗ್ಲ್ಯಾನಿ. ಅನಿ ಕೊನ್ ಕೊನ್ ತೆಚ್ಯಾ ಅಂಗಿಕ್ ಅಪಡ್ಲ್ಯಾನಿ ತೆನಿ ಬರೆ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:36
15 ತಿಳಿವುಗಳ ಹೋಲಿಕೆ  

ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.


ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.


ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು