Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:1 - ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಜೆರುಸಲೇಮಿನಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆರೂಸಲೇವಿುನಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಫಾರಿಜೆವಾ ಅನಿ ಮೊಯ್ಜೆಚೆ ಖಾಯ್ದೆ ಶಿಕ್ವುತಲಿ ಲೊಕಾ ಜೆರುಜಲೆಮಾತ್ನಾ ಜೆಜುಕ್ಡೆ ಯೆಲಿ. ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:1
11 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.


ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು