Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:10 - ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಮೇಲೆ ಯೇಸು ಜನರ ಗುಂಪನ್ನು ಹತ್ತರಕ್ಕೆ ಕರೆದು ಅವರಿಗೆ - ಕಿವಿಗೊಟ್ಟು ಕೇಳಿರಿ, ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ಡೆ ಬಲ್ವುಲ್ಯಾನ್. ಅನಿ “ಆಯ್ಕಾ ಅನಿ ಕಳ್ವುನ್ ಘೆವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:10
13 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು