Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:11 - ಕನ್ನಡ ಸತ್ಯವೇದವು C.L. Bible (BSI)

11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆ ಕಾಯ್ ಮಾನ್ಸಾಚ್ಯಾ ತೊಂಡಾತ್ನಾ ಭುತ್ತುರ್ ಜಾತಾ ತೆ ತೆಕಾ ಅಶುದ್ದ್ ಕರಿನಾ. ಜೆ ಕಾಯ್ ಮಾನ್ಸಾಚ್ಯಾ ತೊಂಡಾತ್ನಾ ಭಾಯ್ರ್ ಯೆತಾ ತೆ ತೆಕಾ ಅಶುದ್ದ್ ಕರ್‍ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:11
26 ತಿಳಿವುಗಳ ಹೋಲಿಕೆ  

“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು