Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಬಾಯೊಳಗಿಂದ ಹೊರಡುವಂಥವುಗಳು ಮನಸ್ಸಿನೊಳಗಿಂದ ಬರುತ್ತವೆ; ಇವೇ ಮನುಷ್ಯನನ್ನು ಹೊಲೆ ಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಜೆ ಕಾಯ್ ಮಾನ್ಸಾಚ್ಯಾ ತೊಂಡಾತ್ನಾ ಭಾಯ್ರ್ ಯೆತಾ ತೆ ತೆಚ್ಯಾ ಮನಾತ್ನಾ ಯೆತಾ, ಅನಿ ಹೆ, ಮಾನ್ಸಾಕ್ ಅಪ್ಪಡ್-ಸಿಪ್ಡಡ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:18
14 ತಿಳಿವುಗಳ ಹೋಲಿಕೆ  

ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.


ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು