Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:22 - ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಎಕ್ ಕಾನಾನ್ ಮನ್ತಲ್ಯಾ ದೆಸಾಚಿ ಬಾಯ್ಕೊಮನುಸ್ ತ್ಯಾ ಥಳಾತ್ ಜಿವನ್ ಕರಿ, ತಿ ಜೆಜುಕ್ಡೆ ಯೆಲಿ, ಅನಿ “ಧನಿಯಾ; ದಾವಿದಾಚ್ಯಾ ಲೆಕಾ, ಮಾಜೆ ವರ್‍ತಿ ದಯಾ ದಾಕ್ವು; ಮಾಜ್ಯಾ ಲೆಕಿಕ್ ಎಕ್ ಗಿರೊ ಲಾಗ್ಲಾ ಅನಿ ತಿ ಲೈ ತರಾಸ್ ಕರುನ್ ಘೆವ್ಲಾ!” ಮನುನ್ ರಡುಕ್‍ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:22
19 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


“ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.


ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II


ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.


ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು