Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:26 - ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುನ್ ತಿಕಾ,“ಪೊರಾಂಚೆ ಜೆವಾನ್ ಘೆವ್ನ್ ಕುತ್ರ್ಯಾಕ್ನಿ ಟಾಕ್ತಲೆ ಸಮಾ ನ್ಹಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:26
10 ತಿಳಿವುಗಳ ಹೋಲಿಕೆ  

“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.


ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು