Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಬಾಯ್ಕೊಮನ್ಸಿನ್,“ತಿಯಾ ಸಾಂಗ್ತಲೆ ಸಮಾ ಹಾಯ್ ಧನಿಯಾ; ಖರೆ ಅಪ್ನಾಚ್ಯಾ ಧನಿಯಾಚೆ ಹುರಲ್ಲೆ ಉಸ್ಟೆ ತರ್‍ಬಿ ಕುತ್ರಿ ಖಾತ್ಯಾತ್ ನ್ಹಯ್”. ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:27
24 ತಿಳಿವುಗಳ ಹೋಲಿಕೆ  

ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.


ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು