Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:31 - ಕನ್ನಡ ಸತ್ಯವೇದವು C.L. Bible (BSI)

31 ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೂಕರಾಗಿದ್ದವರು ಮಾತಾಡಿದ್ದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರಿಗೆ ಕಾಲುಬಂದದ್ದನ್ನೂ ಕುರುಡರಿಗೆ ಕಣ್ಣು ಬಂದದ್ದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ ಜನರ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮುಕ್ಕೆ ಬೊಲ್ತಲೆ, ಬಾಗ್ವುನ್ ಗೆಲ್ಲೆ ನಿಟ್ ಹೊತಲೆ, ಸೊಟ್ಟೆ ಚಲ್ತಲೆ, ಅನಿ ಕುಡ್ಡೆ ಬಗ್ತಲೆ, ಬಗುನ್ ಸಗ್ಳಿ ಲೊಕಾ ಆಜಾಪ್ ಹೊಲಿ, ಅನಿ ಇಸ್ರಾಯೆಲಾಚ್ಯಾ ದೆವಾಕ್ ತೆನಿ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:31
23 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.


ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


“ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.


ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;


ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.


ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು