Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:32 - ಕನ್ನಡ ಸತ್ಯವೇದವು C.L. Bible (BSI)

32 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಯೇಸು ತನ್ನ ಶಿಷ್ಯರನ್ನು ಹತ್ತರಕ್ಕೆ ಕರೆದು ಅವರಿಗೆ - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಅವರು ನನ್ನ ಬಳಿಗೆ ಬಂದು ಈಗ ಮೂರು ದಿನವಾಯಿತು; ಅವರಿಗೆ ಊಟಕ್ಕೆ ಏನೂ ಇಲ್ಲ; ಅವರನ್ನು ಉಪವಾಸವಾಗಿ ಕಳುಹಿಸಿಬಿಡುವದಕ್ಕೆ ನನಗೆ ಮನಸ್ಸಿಲ್ಲ; ದಾರಿಯಲ್ಲಿ ಬಳಲಿಹೋದಾರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ, “ಹ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಮನಾಕ್ ಬೆಜಾರ್ ಹೊವ್ಲಾ ಕಶ್ಯಾಕ್ ಮಟ್ಲ್ಯಾರ್ ತಿನ್ ದಿಸಾ ಹೊಲಿ ತೆನಿ ಮಾಜ್ಯಾ ವಾಂಗ್ಡಾಚ್ ಹಾತ್, ಅನಿ ಅತ್ತಾ ತೆಂಚೆಕ್ಡೆ ಜೆವ್ಕ್ ಕಾಯ್ಬಿ ನಾ ತೆಂಕಾ ಜೆವಾನ್ ದಿ ನಸ್ತಾನಾ ಧಾಡುನ್ ದಿವ್ಕ್ ಮಾಕಾ ಮನ್ ನಾ ತೆನಿ ವಾಟೆರ್ ಜಾತಾನಾ ಖೈಬಿ ಚಕ್ಕರ್ ಯೆವ್ನ್ ಪಡ್ತಿಲ್.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:32
17 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


“ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ;


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.


ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.


ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು