Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:4 - ಕನ್ನಡ ಸತ್ಯವೇದವು C.L. Bible (BSI)

4 ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ ದೇವರು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಎಂಬುದೂ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ದೆವ್ ಮನ್ತಾ. ತುಮ್ಚ್ಯಾ ಬಾಯ್ ಬಾಬಾಕ್ನಿ ಮಾನ್ ದಿವಾ. ಜೆ ಕೊನ್ ಅಪ್ನಾಚ್ಯಾ ಬಾಯ್-ಬಾಬಾಕ್ನಿ ಸರಾಪ್ತಾ ತೆಕಾ ಮರ್‍ನಾಚಿ ಶಿಕ್ಷಾ ದಿವ್ಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:4
18 ತಿಳಿವುಗಳ ಹೋಲಿಕೆ  

ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.


“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.


ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ನಿಮ್ಮ ಸಂಪ್ರದಾಯದ ಸಲುವಾಗಿ ನೀವು ದೇವರ ಆಜ್ಞೆಯನ್ನು ಮೀರುತ್ತೀರಲ್ಲ, ಅದೇಕೆ?”


ನೀವೋ, ಯಾರಾದರೂ ತನ್ನ ತಂದೆಗೆ ಅಥವಾ ತಾಯಿಗೆ, ‘ನನ್ನಿಂದ ನಿಮಗೆ ಸಲ್ಲತಕ್ಕದ್ದು ದೇವರಿಗೆ ಮುಡಿಪು’ ಎಂದು ಹೇಳಿಬಿಟ್ಟರೆ ಮುಗಿಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು