Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:8 - ಕನ್ನಡ ಸತ್ಯವೇದವು C.L. Bible (BSI)

8 ‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಕಾಯ್ ಮಟ್ಲ್ಯಾರ್, ಹಿ ಲೊಕಾ ಖಾಲಿ ತೆಂಚ್ಯಾ ಗೊಸ್ಟಿಯಾನಿ ಎವ್ಡೆಚ್ ಮಾಕಾ ಮಾನ್ ದಿತ್ಯಾತ್. ಖರೆ ತೆಂಚಿ ಮನಾ ಮಾಜೆಕ್ನಾ ಲೈ ಧುರ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:8
11 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು