Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:9 - ಕನ್ನಡ ಸತ್ಯವೇದವು C.L. Bible (BSI)

9 ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಾಜೆ ಆರಾದನ್ ಕರುನ್ ಫಾಯ್ದೊ ನಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಮಾಜೆ ಖಾಯ್ದೆ ಸೊಡುನ್ ಮಾನ್ಸಾನ್ ಕರಲ್ಲೆ ಖಾಯ್ದೆ ಲೊಕಾಕ್ನಿ ಶಿಕ್ವುತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:9
24 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು