Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:11 - ಕನ್ನಡ ಸತ್ಯವೇದವು C.L. Bible (BSI)

11 ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆಜಾಲ್ಯಾರ್ ತುಮ್ಕಾ ಮಿಯಾ ಭಾಕ್ರಿಚ್ಯಾ ವಿಶಯಾತ್ ಬೊಲಿನಾ ಹೊಲಾ ಮನುನ್ ತುಮ್ಕಾ ಅಜುನ್ಬಿ ಕಶ್ಯಾಕ್ ಕಳಿನಾ? ಫಾರಿಜೆವಾಂಚ್ಯಾ ಅನಿ ಸಾದುಸೆವಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:11
10 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?


ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.


ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.


ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು