Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:13 - ಕನ್ನಡ ಸತ್ಯವೇದವು C.L. Bible (BSI)

13 ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಸೆಜರಿಯಾ ಫಿಲಿಪ್ಪಿ ಮನ್ತಲ್ಯಾ ಶಾರಾಂಚ್ಯಾ ಜಗ್ಗೊಳ್ಲ್ಯಾ ಪ್ರಾಂತ್ಯಾತ್ ಪಾವಲ್ಲೊ, ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ,“ಲೊಕಾ ಮಾನ್ಸಾಚ್ಯಾ ಲೆಕಾಕ್ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:13
23 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು;


ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು