ಮತ್ತಾಯ 16:19 - ಕನ್ನಡ ಸತ್ಯವೇದವು C.L. Bible (BSI)19 ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ತುಕಾ ಸರ್ಗಾಚ್ಯಾ ರಾಜಾಚ್ಯಾ ಚಾವಿಯಾ ದಿತಾ; ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರವಾನ್ಗಿ ದಿತೆಯ್ ತೆಕಾ ಸರ್‍ಗಾ ವರ್‍ತಿಬಿ ಪರವಾನ್ಗಿ ದಿವ್ನ್ ಹೊತಾ. ಅನಿ ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರ್‍ವಾನ್ಗಿ ದಿನೆಯ್ ತೆಕಾ ಸರ್‍ಗಾ ವರ್‍ತಿಬಿ ಪರ್‍ವಾನ್ಗಿ ದಿವ್ನ್ ಹೊಯ್ನಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |