Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:25 - ಕನ್ನಡ ಸತ್ಯವೇದವು C.L. Bible (BSI)

25 ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆ ಕೊನ್ ಅಪ್ನಾಚೊ ಜಿವ್‍ ರಾಕುನ್ ಘೆವ್ಕ್ ಬಗ್ತಾ, ತೊ ತೆ ಕಳ್ದುನ್ ಘೆತಾ; ಖರೆ ಜೆ ಕೊನ್ ಅಪ್ನಾಚೊ ಜಿವ್ ಮಾಜೆಸಾಟಿ ಕಳ್ದುನ್ ಘೆತಾ ತೆಕಾ ತೊ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:25
10 ತಿಳಿವುಗಳ ಹೋಲಿಕೆ  

ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.


“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು