Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:26 - ಕನ್ನಡ ಸತ್ಯವೇದವು C.L. Bible (BSI)

26 ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಲೊಕಾನಿ ಹ್ಯೊ ಸಗ್ಳೊ ಜಗುಚ್ ಜಿಕುನ್ ಘೆವ್ನ್ ಅಪ್ನಾಚೊ ಜಿವ್ ನಾಸ್ ಕರುನ್ ಘೆಟ್ಲ್ಯಾರ್, ತೆಂಕಾ ಕಾಯ್ ತರ್ ಫಾಯ್ದೊ ಹಾಯ್ ಕಾಯ್? ಕಾಯ್ಬಿ ಫಾಯ್ದೊ ನಾ! ಕಳ್ದುಗೆಲ್ಲೊ ತೆಂಚೊ ಜಿವ್ ಅನಿ ಪರ್ತುನ್ ಘೆವ್ಕ್ ಮನುನ್ ದಿವ್ಕ್ ತೆಂಚೆಕ್ಡೆ ಕಾಯ್ಬಿ ರ್‍ಹಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:26
11 ತಿಳಿವುಗಳ ಹೋಲಿಕೆ  

ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು