Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:28 - ಕನ್ನಡ ಸತ್ಯವೇದವು C.L. Bible (BSI)

28 ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹಿತ್ತೆ ಹೊತ್ತೆ ಉಲ್ಲೆ ಜಾನಾ ಮಾನ್ಸಾಚೊ ಲೆಕ್ ಸಗ್ಳ್ಯಾಂಚೊ ರಾಜಾ ಹೊವ್ನ್ ಯೆತಲೆ ಬಗಟ್ಲ್ಯಾ ಶಿವಾಯ್ ಮರಿನ್ಯಾತ್. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:28
25 ತಿಳಿವುಗಳ ಹೋಲಿಕೆ  

“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.


ಇದೆಲ್ಲವೂ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ನಿಮಗೆ ಒತ್ತಿ ಹೇಳುತ್ತೇನೆ.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು