Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:3 - ಕನ್ನಡ ಸತ್ಯವೇದವು C.L. Bible (BSI)

3 ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಅನಿ ಸಕ್ಕಾಳಿ ಫಿಡೆ ಮಳಬ್ ತಾಂಬ್ಡೊ ಅನಿ ಎಕ್ ನಮುನಿ ಕಾಳೊಕ್ ಹೊಲ್ಲ್ಯಾ ಸರ್ಕೊ ಹೊವ್ನ್ ರ್‍ಹಾಲ್ಯಾರ್, ‘ಪಾವ್ಸ್ ಯೆನಾರ್ ಹಾಯ್.’” ಮನ್ತ್ಯಾಶಿ. ಮಳ್ಬಾಕ್ ಬಗುಕ್ ವಾತಾವರನ್ ಕಶೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ, ಖರೆ ಹ್ಯಾ ದಿಸಾಂಚಿ ವಳಕ್ ತುಮ್ಕಾ ವಳ್ಕುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:3
11 ತಿಳಿವುಗಳ ಹೋಲಿಕೆ  

ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?


ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);


ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು