Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:1 - ಕನ್ನಡ ಸತ್ಯವೇದವು C.L. Bible (BSI)

1 ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾ ದಿಸಾ ಹೊಲ್ಲ್ಯಾ ಮಾನಾ ಜೆಜು ಪೆದ್ರುಕ್, ಜಾಕೊಬಾಕ್ ಅನಿ ತೆಚ್ಯಾ ಭಾವಾಕ್ ಜುವಾಂವಾಕ್ ಘೆವ್ನ್ ಎಕ್ ಉಪ್ಪರ್ಲ್ಯಾ ಮಡ್ಡಿ ವರ್‍ತಿ ಗೆಲೊ. ಥೈ ತೆನಿ ಎವ್ಡೆಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:1
10 ತಿಳಿವುಗಳ ಹೋಲಿಕೆ  

ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.


ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.


ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು.


ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಯೇಸು ಅವನ ಮನೆಯನ್ನು ಸೇರಿದುದೇ, ಪೇತ್ರ, ಯೊವಾನ್ನ ಹಾಗೂ ಯಕೋಬ ಮತ್ತು ಆ ಬಾಲಕಿಯ ತಂದೆತಾಯಿ ಇವರ ಹೊರತು ಯಾರನ್ನೂ ತನ್ನೊಡನೆ ಒಳಕ್ಕೆ ಬರಗೊಡಲಿಲ್ಲ.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು