Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಮಿಯಾ ತುಮ್ಕಾ ಸಾಂಗ್ತಾ, ಎಲಿಯಾ ಕನ್ನಾಕಿಚ್ ಯೆವ್ನ್ ಹೊಲೆ ಖರೆ ಲೊಕಾನಿ ತೆಕಾ ವಳ್ಕುಕ್‍ನ್ಯಾತ್. ತೆಂಚ್ಯಾ ಮನಾಕ್‍ ಯೆತಾ ತಸೆ ತೆಕಾ ತರಾಸ್ ದಿಲ್ಯಾನಿ, ತಸೆಚ್ ತೆನಿ ಮಾನ್ಸಾಚ್ಯಾ ಲೆಕಾಕ್‍ಬಿ ತರಾಸ್ ದಿತ್ಯಾತ್.”ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:12
25 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ.


ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.


ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು