Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ತೆಕಾ ಜಿವಾನಿ ಮಾರ್‍ತ್ಯಾತ್, ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ತನ್ನಾ ಶಿಸಾಕ್ನಿ ಲೈ ಬೆಜಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:23
18 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಅದಕ್ಕೆ ಯೇಸು, ‘ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು