Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:27 - ಕನ್ನಡ ಸತ್ಯವೇದವು C.L. Bible (BSI)

27 ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:27
27 ತಿಳಿವುಗಳ ಹೋಲಿಕೆ  

ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.


ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.


ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.”


ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ?


“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.


ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;


ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು