Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:5 - ಕನ್ನಡ ಸತ್ಯವೇದವು C.L. Bible (BSI)

5 ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೊ ಬೊಲ್ತಾ-ಬೊಲ್ತಾನಾಚ್ ತೆಂಚೆ ವರ್‍ತಿ ಫಾಂಡ್ರೆ ಮೊಡ್ ಯೆಲೆ ಅನಿ ತೆಂಕಾ ಧಾಪ್ಲ್ಯಾನ್. ಅನಿ ತ್ಯಾ ಮೊಡಾತ್ನಾ“ಹ್ಯೊ ಮಾಜೊ ಅಪುರ್‍ಬಾಯೆಚೊ ಲೆಕ್, ಮಾಜ್ಯಾ ಮನಾ ಸರ್ಕೊ, ತೆನಿ ಸಾಂಗ್ತಲೆ ತುಮಿ ಆಯ್ಕಾ!” ಮನುನ್ ಬೊಲ್ತಲೊ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:5
38 ತಿಳಿವುಗಳ ಹೋಲಿಕೆ  

ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.


‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.


ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು:


ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು