Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:9 - ಕನ್ನಡ ಸತ್ಯವೇದವು C.L. Bible (BSI)

9 ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಡ್ಡಿ ವೈನಾ ಉತ್ರುನ್ ಯೆತಾನಾ, ತುಮಿ ಮಡ್ಡಿ ವರ್‍ತಿ ಬಗಟಲ್ಲೆ, ಮಾನ್ಸಾಚೊ ಲೆಕ್ ಮರುನ್ ಝಿತ್ತೊ ಹೊಯ್ ಪತರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:9
16 ತಿಳಿವುಗಳ ಹೋಲಿಕೆ  

ಆಗ ಯೇಸು, “ಈ ವಿಷಯವನ್ನು ಯಾರಿಗೂ ತಿಳಿಸಬೇಡಿ,” ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು.


ಬಾಲಕಿಯ ತಂದೆತಾಯಿಗಳು ಆಶ್ಚರ್ಯಚಕಿತರಾದರು. ಆಗ ಯೇಸು ನಡೆದ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಆಜ್ಞಾಪಿಸಿದರು.


ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.


ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು.


ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;


ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು