Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:12 - ಕನ್ನಡ ಸತ್ಯವೇದವು C.L. Bible (BSI)

12 “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಸೆಂಬರ್ ಬಕ್ರಿ ಹೊತ್ತೊ ಮಾನುಸ್, ತ್ಯಾತುರ್‍ಲೆ ಎಕ್ ಬಕ್ರೆ ಕಳ್ದುನ್ ಗೆಲ್ಲ್ಯಾ ತನ್ನಾ, ತೊ ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ? ಹುರಲ್ಲ್ಯಾ ನ್ಹವದಾ‍ರ್ ನ್ಹವ್ ಬಕ್ರ್ಯಾಕ್ನಿ ತೊ, ಚರ್‍ತಲ್ಯಾಕ್ಡೆ ಥೈಚ್ ಸೊಡ್ತಾ, ಅನಿ ಕಳ್ದುನ್ ಗೆಲ್ಲ್ಯಾ ಎಕ್ ಬಕ್ರ್ಯಾಕ್ ಹುಡ್ಕುಕ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:12
17 ತಿಳಿವುಗಳ ಹೋಲಿಕೆ  

ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.


“ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು.


ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು