Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:13 - ಕನ್ನಡ ಸತ್ಯವೇದವು C.L. Bible (BSI)

13 ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಖರೆಚ್ ಸಾಂಗ್ತಾ,ತೆಕಾ ತೆ ಬಕ್ರೆ ಗಾವಲ್ಲ್ಯಾ ತನ್ನಾ, ಹುರಲ್ಲ್ಯಾ ನ್ಹವದಾರ್ ನ್ಹವ್ ಬಕ್ರ್ಯಾಂಚ್ಯಾನ್ಕಿ ಹೆ ಕಳ್ದಲ್ಲೆ ಎಕ್ ಬಕ್ರೆ ಗಾವಲ್ಲ್ಯಾ ಸಾಟ್ನಿ ತೊ ಲೈ ಮಟ್ಲ್ಯಾರ್ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:13
14 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?


ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು