Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:14 - ಕನ್ನಡ ಸತ್ಯವೇದವು C.L. Bible (BSI)

14 ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದೇ ರೀತಿ ಈ ಚಿಕ್ಕ ಮಕ್ಕಳಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳಬಾರದೆಂಬುದೇ ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಚ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಹ್ಯಾ ಬಾರಿಕ್ಲ್ಯಾನಿತ್ಲೊ ಎಕ್ಲೊ ಸೈತ್ ಪಾಪಾತ್ ಪಡುನ್ ನರ್ಕಾತ್ ಜಾತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:14
19 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.


ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು