Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:20 - ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಖೈ ದೊಗೆ ಜಾನಾ ನಾಜಾಲ್ಯಾರ್ ತಿಗೆಜಾನಾ ಮಾಜ್ಯಾ ನಾವಾನ್ ಗೊಳಾ ಹೊತ್ಯಾತ್, ಥೈ ತೆಂಚ್ಯಾ ವಾಂಗ್ಡಾ ಮಿಯಾಚ್ ಹಾಜರ್ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:20
15 ತಿಳಿವುಗಳ ಹೋಲಿಕೆ  

ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು