Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:24 - ಕನ್ನಡ ಸತ್ಯವೇದವು C.L. Bible (BSI)

24 ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆನಿ ಲೆಕ್ಕ್ ಕರುಕ್ ಚಾಲು ಕರಲ್ಲ್ಯಾ ತನ್ನಾ , ರಿನ್ ದಿತಲ್ಯಾತ್ಲ್ಯಾ ಎಕ್ಲ್ಯಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ ತೆನಿ ಕರೊಡಾನಿ ರಿನ್ ಫೆಡ್ತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:24
17 ತಿಳಿವುಗಳ ಹೋಲಿಕೆ  

ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II


ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.


170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.


ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.


ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;


ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು