Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಸೇವಕನು ಅವನ ಕಾಲಿಗೆ ಬಿದ್ದು ಅವನಿಗೆ - ಒಡೆಯನೇ, ಸ್ವಲ್ಪ ತಾಳಿಕೋ, ನಿನ್ನದೆಲ್ಲಾ ನಾನು ಕೊಟ್ಟು ತೀರಿಸುತ್ತೇನೆಂದು ನಮಸ್ಕರಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆಗ ಸೇವಕನು ರಾಜನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆ ತಂದುಕೊಳ್ಳಿ. ನಾನು ನಿಮಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ.’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೊ ಆಳ್ ರಾಜಾಚ್ಯಾ ಪಾಯಾ ಪಡುನ್, "ಮಾಕಾ ಉಲ್ಲೊ ಎಳ್ ದಿ, ಮಿಯಾ ತುಮ್ಚೆ ರಿನ್ ಸಗ್ಳೆ ಫೆಡ್ತಾ! ಮನುನ್ ಮಾಗುನ್ಗೆತ್ ರಡುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:26
5 ತಿಳಿವುಗಳ ಹೋಲಿಕೆ  

ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.


ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು