Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:27 - ಕನ್ನಡ ಸತ್ಯವೇದವು C.L. Bible (BSI)

27 ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ರಾಜಾಕ್ ತ್ಯಾ ಸೆವಕಾಚೊ ಪಾಪ್ ದಿಸ್ಲೊ. ತೆಚೆಸಾಟ್ನಿ ರಾಜಾನ್ ತೆಚೆ ಸಗ್ಳೆ ರಿನ್ ಸುಟ್ ಕರ್‍ಲ್ಯಾನ್ ಅನಿ ತೆಕಾ ಸೊಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:27
11 ತಿಳಿವುಗಳ ಹೋಲಿಕೆ  

ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.


ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.


ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು