Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:31 - ಕನ್ನಡ ಸತ್ಯವೇದವು C.L. Bible (BSI)

31 ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನ ಜೊತೇ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಬಗುನ್ ಹುರಲ್ಲ್ಯಾ ಆಳಾಕ್ನಿ ಲೈ ವಾಯ್ಟ್ ದಿಸ್ಲೆ. ತೆನಿ ಜಾವ್ನ್ ಹೆ ರಾಜಾಕ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:31
16 ತಿಳಿವುಗಳ ಹೋಲಿಕೆ  

ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


“ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II


ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.


ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.


ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು