Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ತುಮ್ಚೊ ಹಾತ್ ನಾಹೊಲ್ಯಾರ್ ಪಾಯ್ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಹೊಲ್ಯಾರ್, ತೊ ಕಾತ್ರುನ್ ಧುರ್ ನ್ಹೆವ್ನ್ ಟಾಕಾ! ದೊನಿಬಿ ಹಾತಾ ನಾಹೊಲ್ಯಾರ್ ಪಾಯಾ ಘೆವ್ನ್ ತುಮಿ ಕನ್ನಾಬಿ ಇಜಿನಸಲ್ಲ್ಯಾ ಆಗಿತ್ ಜಾತಾಲ್ಯಾಚ್ಯಾನ್ಕಿ, ಎಕ್ ಹಾತ್ ನಾ ತರ್ ಪಾಯ್‍ ನಸ್ತಾನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ಗೆಲ್ಲೆ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:8
22 ತಿಳಿವುಗಳ ಹೋಲಿಕೆ  

ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು