Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:11 - ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಅವರಿಗೆ - ಈ ಮಾತನ್ನು ಅಂಗೀಕರಿಸುವ ವರವನ್ನು ಹೊಂದಿದವರೇ ಹೊರತು ಮತ್ತಾರೂ ಅದನ್ನು ಅಂಗೀಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್ ತೆಂಕಾ,“ಹೆ ಮಿಯಾ ಶಿಕ್ವುತಲೆ ಸಗ್ಳ್ಯಾಕ್ನಿಬಿ ಸಮಂದ್ ಪಡಿನಾ, ಜೆ ಕೊನಾಕ್ ದೆವಾನ್ ತೆ ದಿಲ್ಯಾನಾಯ್, ತೆಂಕಾ ಎವ್ಡೆಚ್ ಸಮಂದ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:11
7 ತಿಳಿವುಗಳ ಹೋಲಿಕೆ  

ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.


ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು.


ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು