ಮತ್ತಾಯ 19:28 - ಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜುನ್ ತೆಂಕಾ,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಮಹಿಮೆನ್ ಅಪ್ನಾಚ್ಯಾ ಸಿವಾಸನಾ ವರ್‍ತಿ ಬಸಲ್ಲ್ಯಾ ತನ್ನಾ ಸಗ್ಳೆ ನ್ಹವೆ ಕರ್‍ತಾ. ತನ್ನಾ ತುಮಿ ಬಾರಾ ಜಾನಾ ಮಾಜ್ಯಾ ವಾಂಗ್ಡಾ ಹೊತ್ತೆ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜ್ ಚಾಲ್ವುಕ್ ಬಾರಾ ಸಿವಾಸನಾಂಚ್ಯಾ ವರ್‍ತಿ ಬಸ್ತ್ಯಾಶಿ. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.