Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:4 - ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು - ಮನುಷ್ಯರನ್ನು ನಿರ್ಮಾಣ ಮಾಡಿದವನು ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್ ತೆಂಕಾ, ತುಮಿ ಪವಿತ್ರ್ ಪುಸ್ತಕಾತ್. ರಚ್ತಲ್ಯಾನ್ ಅದ್ದಿ ರಚ್ತಾನಾ ಬಾಯ್ಕೊಮನುಸ್, ಅನಿ ಘೊಮನುಸ್ ಮನುನ್ ರಚ್ಲ್ಯಾನ್, ಮನುನ್ ವಾಚ್ವುಕ್‍ನ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:4
15 ತಿಳಿವುಗಳ ಹೋಲಿಕೆ  

ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.


ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.


ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,


ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ?


ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಮಾಡಿದಂತೆಯೇ ಹೇಸರಗತ್ತೆಯನ್ನೂ ಮರಿಯನ್ನೂ ಅಟ್ಟಿಕೊಂಡು ಬಂದರು.


ಯೆಹೋಯಾದನು ಅರಸನಿಗೆ ಇಬ್ಬರು ಕನ್ಯೆಯರನ್ನು ಮದುವೆಮಾಡಿ ಕೊಟ್ಟನು; ಅವರಿಂದ ಗಂಡು ಹೆಣ್ಣು ಮಕ್ಕಳು ಜನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು