Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:8 - ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು - ಮೋಶೆಯು ನಿಮ್ಮ ಮೊಂಡತನವನ್ನು ನೋಡಿ ನಿಮ್ಮ ಹೆಂಡರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು; ಆದರೆ ಆದಿಯಿಂದಲೇ ಹಾಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆಜುನ್ ತೆಂಕಾ,“ತುಮ್ಚ್ಯಾ ಮಂಡ್‍ಪಾನಾಕ್ ಲಾಗುನ್ ಮೊಯ್ಜೆನ್ ತುಮ್ಕಾ ಸೊಡ್ ಪತ್ತರ್ ದಿವ್ನ್ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಸಾಂಗಲ್ಲೆ, ಖರೆ ರಚ್ತಲ್ಯಾ ಏಳಾರ್ ಹೆ ತಸೆ ನತ್ತೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:8
14 ತಿಳಿವುಗಳ ಹೋಲಿಕೆ  

ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು.


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


ಇದು ನನ್ನ ಆಜ್ಞೆಯಲ್ಲ, ಅನುಮತಿಯಷ್ಟೆ.


“ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.


"ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.


ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.”


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ದಾವೀದನು ಜೆಸ್ರೀಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಈಗ ಅಬೀಗೈಲಳೂ ಅವನ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು