Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:11 - ಕನ್ನಡ ಸತ್ಯವೇದವು C.L. Bible (BSI)

11 ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತ್ಯಾ ಘರಾತ್ ಗೆಲ್ಯಾನಿ ಅನಿ ತೆಚ್ಯಾ ಬಾಯ್ ಮರಿಕ್ಡೆ ಹೊತ್ತ್ಯಾ ಪೊರಾಕ್ ಬಗುನ್ ಡೊಗ್ಲಾ ಟೆಕುನ್ ತೆಕಾ ಮಾನ್ ಕರ್‍ಲ್ಯಾನಿ. ಮಾನಾ ಅಪ್ನಿ ಹಾನಲ್ಲೆ ಸೊನೆ, ಧುಪ್ ಅನಿ ರಗಾತ್ಬೊಳ್ ಕಾನಿಕ್ ಮನುನ್ ತ್ಯಾ ಪೊರಾಕ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:11
33 ತಿಳಿವುಗಳ ಹೋಲಿಕೆ  

ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅಲ್ಲಿಂದ ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೇಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.


ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


“ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು