Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:12 - ಕನ್ನಡ ಸತ್ಯವೇದವು C.L. Bible (BSI)

12 ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆರೊದ್ ರಾಜಾಕ್ಡೆ ಪರ್ತುನ್ ಜವ್ನಕಾಸಿ ಮನುನ್ ದೆವಾನ್ ತೆಂಕಾ ಸಪ್ನಾತ್ ಯೆವ್ನ್ ತಾಕಿತ್ ದಿಲ್ಲ್ಯಾನ್, ತಸೆ ಮನುನ್ ತೆನಿ ದುಸ್ರಿಚ್ ವಾಟ್ ಧರುನ್ ತೆಂಚ್ಯಾ ದೆಸಾಕ್ನಿ ಪರ್ತುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:12
17 ತಿಳಿವುಗಳ ಹೋಲಿಕೆ  

ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು