ಮತ್ತಾಯ 2:13 - ಕನ್ನಡ ಸತ್ಯವೇದವು C.L. Bible (BSI)13 ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತಿ ಭೆಟುಕ್ ಎಲ್ಲಿ ಲೊಕಾ ಗೆಲ್ಲ್ಯಾ ತನ್ನಾ ಸರ್ವೆಸ್ವರಾಚೊ ಎಕ್ ದುತ್ ಜುಜೆಕ್ ಸಪ್ನಾತ್ ದಿಸ್ಲೊ, ಅನಿ, “ಉಟ್, ಹೆರೊದ್ ಬಾಳ್ಶ್ಯಾಚೊ ಜಿವ್ ಕಾಡುಕ್ ಮನುನ್ ಹುಡ್ಕುನ್ಗೆತ್ ಯೆನಾರ್ ಹಾಯ್, ಬಾಳ್ಶ್ಯಾಕ್ ಅನಿ ತೆಚ್ಯಾ ಅವ್ಸಿಕ್ ಘೆ ಅನಿ ಇಜಿಪ್ತಾಕ್ ಪಳುನ್ ಜಾ, ಅನಿ ಮಿಯಾ ಸಾಂಗಿ ಪತರ್ ಥೈಚ್ ರ್‍ಹಾ,” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |