Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:19 - ಕನ್ನಡ ಸತ್ಯವೇದವು C.L. Bible (BSI)

19 ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆರೊದ್ ರಾಜಾ ಮರಲ್ಲ್ಯಾ ತನ್ನಾ ಸರ್ವೆಸ್ವರಾಚೊ ದುತ್ ಅನಿ ಎಗ್ದಾ ಇಜಿಪ್ತಾತ್ ಜುಜೆಕ್ ಸಪ್ನಾತ್ ದಿಸ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:19
13 ತಿಳಿವುಗಳ ಹೋಲಿಕೆ  

ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು