Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:2 - ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ “ಜುದೆವ್ ಲೊಕಾಂಚೊ ರಾಜಾ ಹೊವ್ಕ್ ಮನುನ್ ಜಲಮಲ್ಲೊ ಪೊರ್ ಖೈ ಹಾಯ್? ದಿಸ್ ಉಗಾವ್ತಲ್ಯಾ ದಿಕ್ಕಾಕ್ ತೆಚೆ ಚಿಕ್ಕಿ ವೈರ್ ಯೆಲ್ಲೆ ಅಮಿ ಬಗಟ್ಲಾವ್, ಅನಿ ತೆಕಾ ಮಾನ್ ಕರುಕ್ ಮನುನ್ ಅಮಿ ಯೆಲಾವ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:2
28 ತಿಳಿವುಗಳ ಹೋಲಿಕೆ  

ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಆಗ ಪಿಲಾತನು, “ನೀನು ಯೆಹೂದ್ಯರ ಅರಸನೋ?” ಎಂದು ಯೇಸುವನ್ನು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


“ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.


ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು