Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:6 - ಕನ್ನಡ ಸತ್ಯವೇದವು C.L. Bible (BSI)

6 ‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜುದೆಯಾಚ್ಯಾ ಬೆತ್ಲೆಹೆಮಾ, ಜುದಾಚ್ಯಾ ಅದಿಕಾರಾತ್ ತಿಯಾ ಬಾರಿಕ್ ಮನುನ್ ಯವ್ಜುನಕೊ. ತುಜ್ಯಾ ಭುತ್ತುರ್ನಾ ಯೆತಾ ಎಕ್ ಫುಡಾರಿ ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ಚಾಲ್ವುನ್ ಘೆವ್ನ್ ಜಾತಲೊ. ಮನುನ್ ಲಿವಲ್ಲೆ ಹಾಯ್, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:6
24 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”


ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು