Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:1 - ಕನ್ನಡ ಸತ್ಯವೇದವು C.L. Bible (BSI)

1 “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಜೆಜುನ್, ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ಮಾನುಸ್ ಸಕ್ಕಾಳಿ ಫಿಡೆ ಅಪ್ನಾಚ್ಯಾ ದರಾಕ್ಷಿಚ್ಯಾ ಮಳ್ಯಾತ್ ಕಾಮಾಕ್ ಯೆತಲಿ ಆಳಾ ಹುಡ್ಕುಕ್ ಮನುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:1
22 ತಿಳಿವುಗಳ ಹೋಲಿಕೆ  

“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.


ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.


“ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು