Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:11 - ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ತಮ್ಮ ಬೆಳ್ಳಿನಾಣ್ಯವನ್ನು ತೆಗೆದುಕೊಂಡಾಗ ತೋಟದ ಯಜಮಾನನ ಬಗ್ಗೆ ಗೊಣಗುಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತೆ ಘೆಟ್ಲ್ಯಾನಿ ಅನಿ ಮಾಲ್ಕಾಚ್ಯಾ ವರ್‍ತಿ ಪುರ್‍ವುರುಕ್‍ಲಾಗ್ಲ್ಯಾನಿ.ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:11
14 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.


‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.


ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು