Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:13 - ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ಮಾಲ್ಕಾನ್, ತೆಂಚ್ಯಾತ್ಲ್ಯಾ ಎಕ್ಲ್ಯಾಕ್, ಮಾಜ್ಯಾ ದೊಸ್ತಾ, ಮಿಯಾ ತುಕಾ ಅನ್ನ್ಯಾಯ್ ಕರುಕ್ ನಾ. ಎಕ್ ದಿಸಾಚಿ ಮಜುರಿ ಎಕ್ ಚಾಂದಿಚೊ ಪೈಸೊ ಮನುನ್ ಮಿಯಾ ತುಕಾ ಸಾಂಗಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:13
11 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.


‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು