ಮತ್ತಾಯ 20:15 - ಕನ್ನಡ ಸತ್ಯವೇದವು C.L. Bible (BSI)15 ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಮಾಜೆ ಸ್ವತಾಚೆ ಪೈಸೆ ಮಿಯಾ ಮಾಕಾ ಪಾಜೆ ತಸೆ ಕರುಕ್ ಮಾಕಾ ಹಕ್ಕ್ ನಾ ಕಾಯ್? ಅನಿ ಎಕ್ಲ್ಯಾಕ್ ಬರೆ ಕರ್‍ತಲೆ ಬಗುನ್ ಪೊಟಾತ್ ಜಳುಲಾ ಕಾಯ್? ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.