Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:21 - ಕನ್ನಡ ಸತ್ಯವೇದವು C.L. Bible (BSI)

21 “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ ತಿಕಾ “ಕಾಯ್ ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೆಜುಕ್,“ತಿಯಾ ರಾಜಾ ಹೊಲ್ಲ್ಯಾ ತನ್ನಾ ಹ್ಯಾ ಮಾಜ್ಯಾ ದೊನಿಬಿ ಲೆಕಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಬಸ್ವುತಾ ಮನುನ್ ಮಾಕಾ ಗೊಸ್ಟ್ ದಿ.” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:21
24 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.


ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್‍ಸ್ಥಾಪಿಸುವಿರೋ?” ಎಂದು ಕೇಳಿದರು.


ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.


ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು.


ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.


ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು